ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, 4 ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ ಕಾಂಗ್ರೆಸ್ ಮೂರು ಬಿಜೆಪಿ ಒಂದು ಜೆಡಿಎಸ್ ಒಂದು ಅಭ್ಯರ್ಥಿ ಕಣಕ್ಕಿಳಿದಿದ್ದರು.
223 ಶಾಸಕರ ಪೈಕಿ 222 ಮಂದಿ ಮತ ಚಲಾಯಿಸಲಾಗಿತ್ತು, ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಮತದಾನ ಮಾಡದೆ ಗೈರುಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದ್ದು 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಗೆಲುವಾಗಿದೆ ಎಂದು ಹೇಳಲಾಗಿದೆ.
ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅಜಯ್ ಮಕನ್ ಗೆ 47 ಸೈಯದ್ ನಾಸೆರ್ ಹುಸೇನ್ ಗೆ 47 ಹಾಗೂ ಜೆಸಿ ಚಂದ್ರಶೇಖರ್ ಗೆ 45 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ನಾರಾಯಣ ಸಭಾ ಭಾಂಡಗೆ 47 ಒಟ್ಟು ಬಿದ್ದಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 36 ಮತಗಳು ಸಿಕ್ಕಿವೆ ಎನ್ನಲಾಗಿದೆ.