ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ರೇವಣ್ಣ ಸಹ ಕಾಂಗ್ರೆಸ್ ನಾಯಕರನ್ನು ಜಿಲ್ಲೆಯಲ್ಲಿ ಕ್ಯಾರೆ ಎನ್ನುತ್ತಿರಲಿಲ್ಲ. ಇದೀಗ ಮಗನನ್ನು ಗೆಲ್ಲಿಸಲು ನೀವೇ ಆಪತ್ಬಾಂಧವ ಎಂದು ಸಿದ್ದರಾಮಯ್ಯ ಅವರ ಮೊರೆ ಹೋಗಿದ್ದು, ಸಿದ್ದು ಮೂಲಕ ಹಾಸನ ಕಾಂಗ್ರೆಸ್ ನಾಯಕರ ವಿಶ್ವಾಸ ತೆಗೆದುಕೊಳ್ಳುವ ಪ್ರಯತ್ನ ನಡೆಸಿದೆರು. ಕಾವೇರಿ ನಿವಾಸದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಎಚ್.ಡಿ. ರೇವಣ್ಣ ಅವರು ಭಾಗವಹಿಸಿದ್ದು, ಪುತ್ರನಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.ಸಭೆಯಲ್ಲಿ ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಾವಗಲ್ ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಗೋಪಾಲಸ್ವಾಮಿ ಮತ್ತಿತರರು ಇದ್ದರು.
ಒಟ್ಟಿನಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಹಾಸನದಲ್ಲಿ ತಾವು ನಡೆದಿದ್ದೇ ಹಾದಿ ಎಂದು ಕಾಂಗ್ರೆಸ್ ನಾಯಕರನ್ನು ಕಡೆಗಣಿಸಿದ್ದ ರೇವಣ್ಣ ಇದೀಗ ಸಿದ್ದು ಮೂಲಕ ವಿರೋಧಿಗಳ ಮನವೋಲಿಸುವ ಕಾರ್ಯಕ್ಕಿಳಿದಿದಂತೂ ಸತ್ಯ. ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಫುಲ್ ಡಿಮ್ಯಾಂಡ್ ಬಂದಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಬಗೆಹರಿಸುವಂತೆ ಜೆಡಿಎಸ್ ನಾಯರು ಸಿದ್ದರಾಮಯ್ಯ ಅವರ ಮೊರೆ ಹೋಗುತ್ತಿದ್ದಾರೆ. ಮೊನ್ನೇ ಅಷ್ಟೇ ಸಚಿವ ಎಚ್.ಡಿ.ರೇವಣ್ಣ ಅವರು ಸಿದ್ದು ಭೇಟಿ ಮಾಡಿ ಹಾಸನದಲ್ಲಿ ಕೈ ಕಾರ್ಯಕರ್ತರ ಅಸಮಾಧಾನ ತಣಿಸಿ,ತಮ್ಮ ಪುತ್ರನ ಗೆಲುವಿಗೆ ನೆರವಾಗಿ ಎಂದು ಮನವಿ ಮಾಡಿದ್ದರು. ಇದೀಗ ಸ್ವತಃ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.