ಬೆಂಗಳೂರು ರಿಂಗ್‌ ರೈಲು ಆರಂಭ!

ಬೆಂಗಳೂರು ರಿಂಗ್‌ ರೈಲು ಆರಂಭ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಹೊರವಲಯದ ಸುತ್ತಲೂ ಸುಮಾರು 287 ಕಿಮೀ ಉದ್ದದ ರಿಂಗ್​ ರೈಲು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಗರದಲ್ಲಿ ನಿಯಂತ್ರಿಸಲು ಬೆಂಗಳೂರು ಹೊರವಲಯದ ಸುತ್ತಲೂ ಸುಮಾರು 287 ಕಿಮೀ ಉದ್ದದ ರಿಂಗ್​ ರೈಲು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಅಧ್ಯಯನಕ್ಕಾಗಿ ಈಗಾಗಲೆ 7 ಕೋಟಿ ರೂ. ಮಂಜಾರಾಗಿತ್ತು. ಇದೀಗ ಯೋಜನೆಗಾಗಿ ರೈಲ್ವೆ ಇಲಾಖೆಯಿಂದ ಅಂತಿಮ ಹಂತದ ಲೊಕೇಶನ್ ಸರ್ವೆ ಕಾರ್ಯ ನಡೆಯುತ್ತಿದೆ.

ಈ ರಿಂಗ್​ ರೈಲ್​​ ಏಳು ಪ್ರಮುಖ ನಿಲ್ದಾಣಗಳನ್ನು ಹೊಂದಿರಲಿದೆ. ನೀಡವಂದ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ, ಹೆಜ್ಜಾಲ, ಸೋಲುರು ಪ್ರಮುಖ ನಿಲ್ದಾಣಗಳಾಗಿವೆ. ಬೆಂಗಳೂರು ಉಪನಗರ ರೈಲ್ವೇ ಯೋಜನೆ, ನಮ್ಮ ಮೆಟ್ರೋ ರೈಲಿಗೆ ಪೂರಕವಾಗಿ ನಗರದ ಸುತ್ತ ವೃತ್ತಾಕಾರವಾಗಿ ರಿಂಗ್​ ರೈಲು ಯೋಜನೆ ನಿರ್ಮಾಣಗೊಳ್ಳಲಿದೆ. ನಗರದಲ್ಲಿ ಮುಂದಿನ 20-30 ವರ್ಷಗಳ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಲ್ಲಿ ರಿಂಗ್​ ರೈಲ್​​ ಪ್ರಮುಖ ಪಾತ್ರ ವಹಿಸಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos