2024ರ ಐಪಿಎಲ್‌ ನಲ್ಲಿ ರಿಷಭ್ ಪಂತ್ ಅಬ್ಬರ

2024ರ ಐಪಿಎಲ್‌ ನಲ್ಲಿ ರಿಷಭ್ ಪಂತ್ ಅಬ್ಬರ

ಬೆಂಗಳೂರು: ಕಳೆದ ಒಂದು ವರ್ಷದ ಹಿಂದೆ ನಡೆದ ಕಾರು ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಬ್ ಪಂತ್, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಐಪಿಎಲ್‌ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ರ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿರುವ ರಿಷಭ್ ಪಂತ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಕಳೆದ ಒಂದು ವರ್ಷದಿಂದ ಮೈದಾನದಿಂದ ಹೊರಗುಳಿದಿದ್ದರೂ ಇದೀಗ ಪಂತ್ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಅದರಲ್ಲೂ ವಿಶಾಖಪಟ್ಟಣಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 273 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 33 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಕಣಕ್ಕಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ 25 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್ ಬಾರಿಸಿ ರಿಷಭ್ ಪಂತ್ ವಿಕೆಟ್ ಒಪ್ಪಿಸಿದರು. ಅಲ್ಲದೆ 273 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂತಿಮವಾಗಿ 17.2 ಓವರ್​ಗಳಲ್ಲಿ 166 ರನ್​ಗಳಿಗೆ ಸರ್ವಪತನ ಕಂಡಿತು.

ಫ್ರೆಶ್ ನ್ಯೂಸ್

Latest Posts

Featured Videos