ರಿಷಭ್​ ಪಂತ್​ಗೆ ​2ನೇ ಬಾರಿ ದಂಡ ವಿಧಿಸಿದ ಬಿಸಿಸಿಐ

ರಿಷಭ್​ ಪಂತ್​ಗೆ ​2ನೇ ಬಾರಿ ದಂಡ ವಿಧಿಸಿದ ಬಿಸಿಸಿಐ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದ್ದು ಎಲ್ಲ ಪಂದ್ಯಗಳು ಅತ್ಯಂತ ರೋಚಕದಿಂದ ಕೂಡಿದೆ. ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 106 ಅಂತರದ  ಹೀನಾಯ ಸೋಲನ್ನು ಕಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ 16ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಿತ್ತು.

ಆದರೆ ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos