ರಿಷಬ್ ಶೆಟ್ಟಿಗೆ ಒಲಿದು ಬಂತು ಮತ್ತೊಂದು  ಪ್ರಶಸ್ತಿ

ರಿಷಬ್ ಶೆಟ್ಟಿಗೆ ಒಲಿದು ಬಂತು ಮತ್ತೊಂದು  ಪ್ರಶಸ್ತಿ

ಬೆಂಗಳೂರು: ಇಡೀ ವಿಶ್ವದಾದ್ಯಂತ ಧೂಳೆಬ್ಬಿಸಿದ ಕಾಂತಾರ ಸಿನಿಮಾಗೆ ಇದೀಗ ಮತ್ತೊಂದು ಪ್ರಶಸ್ತಿ ಒಲಿದು ಬಂದಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಹೌದು, ರಿಷಬ್ ಶೆಟ್ಟಿ ನಟನೆ ಮತ್ತು ನಿರ್ಮಾಣದ ಸಿನಿಮಾ ಕಾಂತರಾ ಇಡೀ ವಿಶ್ವದಾದ್ಯಂತ ಹೆಚ್ಚು ಹೆಸರುವಾಸಿಯಾಗಿದ್ದು, ಇದೀಗ ಕಾಂತಾರ ಸಿನಿಮಾದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರಮಟ್ಟದ ಗೌರವ ಸಲ್ಲಿದ್ದು ಅತ್ಯುತ್ತಮ ನಟ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ.

ಕಾಂತಾರ ಸಿನಿಮಾ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಕಬಳಿಸಿಕೊಂಡಿದ್ದು ಇದೀಗ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಂತಾರ ಸಿನಿಮಾದ ನಟನೆಗೆ ನಟ ರಿಷಬ್ ಶೆಟ್ಟಿ ಅವರು ಅತ್ಯುತ್ತಮ ನಟ ಗೌರವಕ್ಕೆ ಪಾತ್ರರಾಗಿದ್ದಾರೆ.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ‌ ನಟ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ನ್ಯಾಷನಲ್ ಅವಾರ್ಡ್ ಸ್ವೀಕರಿಸಿದಕ್ಕೆ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos