ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮೇಲೆ ಐಟಿ ದಾಳಿ

ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಪ್ತರ ಮೇಲೆ ಐಟಿ ದಾಳಿ

ಬೆಂಗಳೂರು, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಆಪ್ತರ ಸುಮಾರು 20 ನಿವಾಸದ ಮೇಲೆ 100 ಕ್ಕೂ ಹೆಚ್ಚು ಐಟಿ ಅದಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ ಉದ್ಯಮಿಗಳಾದ ಅಮಾನುಲ್ಲಾ ಖಾನ್ ಕಮಲ್ ಪಾಶಾ, ರಿಯಲ್ ಎಸ್ಟೇಟ್ ಉದ್ಯಮಿ ನಯೀಜ್ ಖಾನ್ ಅವರ ಮನೆಗಳ ಮೇಲೆ ಐಟಿ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮ ಹಣ ರವಾನೆಯಾಗಿದೆ ಎಂಬ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos