ರಸ್ತೆಯಲ್ಲಿ ಗುಂಡಿ ವಾಹನ ಸವಾರರ ಪರದಾಟ!

ರಸ್ತೆಯಲ್ಲಿ ಗುಂಡಿ ವಾಹನ ಸವಾರರ ಪರದಾಟ!

ದೇವನಹಳ್ಳಿ, ಸೆ. 16: ದೊಡ್ಡಬಳ್ಳಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 207ರ ವಿಶ್ವನಾಥಪುರ ಗ್ರಾಮದ ಸಮೀಪದಲ್ಲಿ ದೊಡ್ಡ ಗುಂಡಿಗಳು ಬಿದ್ದಿದ್ದು, ಹಲವಾರು ವಾಹನ ಸವಾರರಿಗೆ ಹೆಚ್ಚು ತೊಂದರೆಯಾಗುತ್ತಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ರಸ್ತೆಯಲ್ಲಿ ಡಾಂಬರು ಕಿತ್ತು ಹೋಗಿ ದೊಡ್ಡ ಗಾತ್ರದ ಗುಂಡಿಗಳು ಬಿದ್ದು, ಜಲ್ಲಿಕಲ್ಲುಗಳು ಹಾಗೂ ಮರಳು ದಿಬ್ಬುಗಳಾಗಿ ಮಾರ್ಪಾಡಿದೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚು ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಮಳೆ ಬಂದರೆ ಗುಂಡಿಯಲ್ಲಿ ನೀರು ನಿಂತುಕೊಂಡು ರಸ್ತೆ ಕಾಣದಂತೆ ದ್ವಿಚಕ್ರ ವಾಹನ ಸವಾರರು ಎದ್ದು ಬಿದ್ದು ಆಸ್ಪತ್ರೆ ಸೇರುವಂತೆ ಆಗಿದೆ.

ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಈ ರಸ್ತೆಯಲ್ಲಿ ಜಿಲ್ಲಾಡಳಿತ ಭವನ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಸಾರ್ವಜನಿಕರು ದಿನನಿತ್ಯ ಹೋರಾಡುವ ರಸ್ತೆಯಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಸುಮಾರು ತಿಂಗಳಿನಿಂದ ಚಿಕ್ಕದಾಗಿ ಬಿದ್ದಿದ್ದ ಗುಂಡಿ ಮಳೆಗೆ ಸಿಲುಕಿ ದೊಡ್ಡ ಗುಂಡಿಯಾಗಿದೆ. ಕೂಡಲೇ ಇಂತಹ ಗುಂಡಿಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಮುಚ್ಚಿಸುವ ಕೆಲಸ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯೇ ಈ ರೀತಿಯಾದರೆ ಉಳಿದ ರಸ್ತೆಗಳ ಗತಿಯೇನು, ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆಯಾಗುತ್ತಾರೆ.

 

ಫ್ರೆಶ್ ನ್ಯೂಸ್

Latest Posts

Featured Videos