ರೋಹಿತ್ ಶರ್ಮಾ ಸೊನ್ನೆಗೆ ವಿಕೆಟ್

ರೋಹಿತ್ ಶರ್ಮಾ ಸೊನ್ನೆಗೆ ವಿಕೆಟ್

ಮಾ. 5, ನ್ಯೂಸ್ ಎಕ್ಸ್,ನಾಗ್ಪುರ: ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ದ್ವಿತೀಯ ಏಕದಿನ ಪಂದ್ಯವನ್ನಾಡುತ್ತಿವೆ. ಈ ಪಂದ್ಯ ಗೆದ್ದು 5 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯ ಮುನ್ನಡೆ ಸಾಧಿಸುವತ್ತ ಭಾರತ ಕಣ್ಣಿಟ್ಟಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದೆ. ಭಾರತಕ್ಕೆ ಪ್ರಾರಂಬದಲ್ಲೇ ಆಘಾತವಾಗಿದೆ. ರೋಹಿತ್ ಶರ್ಮಾ ಸೊನ್ನೆಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಅಂಬಾಟಿ ರಾಯುಡು, ಎಂಎಸ್ ಧೋನಿ (ವಿ.ಕೆ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬೂಮ್ರಾ.

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ಆರನ್ ಫಿಂಚ್ (ಸಿ), ಮಾರ್ಕಸ್ ಸ್ಟೊಯಿನಿಸ್, ಪೀಟರ್ ಹ್ಯಾಂಡ್ಸ್ಕಾಂಬ್, ಗ್ಲೆನ್ ಮ್ಯಾಕ್ಸ್ವೆಲ್, ಆಷ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ (ವಿಕೆ), ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ಆಡಮ್ ಜಂಪಾ, ಜಾಸನ್ ಬೆಹೆರೆನ್ಡಾಫ್.

ಫ್ರೆಶ್ ನ್ಯೂಸ್

Latest Posts

Featured Videos