ಬೇಗ್ ವಿರುದ್ಧ ಕ್ರಮಕ್ಕೆ ಶಿಫಾರಸು

ಬೇಗ್ ವಿರುದ್ಧ ಕ್ರಮಕ್ಕೆ ಶಿಫಾರಸು

ಬೆಂಗಳೂರು , ಜೂನ್.10, ನ್ಯೂಸ್ ಎಕ್ಸ್ ಪ್ರೆಸ್: ಪದೇ ಪದೇ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ. ಹಿರಿಯ ಕಾಂಗ್ರೆಸ್ ನಾಯಕ, ಶಾಸಕ ರೋಷನ್ ಬೇಗ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮೂಲ ತಿಳಿಸಿದೆ.

ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಪಕ್ಷಕ್ಕೂ ಮುಜುಗರ ಉಂಟು ಮಾಡಿದ್ದರು. ಇದೆಲ್ಲವನ್ನು ದಾಖಲೆ ಸಹಿತ ಹೈಕಾಮಾಂಡ್ ಗೆ ದೂರು ನೀಡಲಾಗಿದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಈ ಮೊದಲು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣಕ್ಕೆ ಕೆಪಿಸಿಸಿ ನೀಡಿದ ನೋಟಿಸ್‍ಗೆ ಕೂಡ ರೋಷನ್ ಬೇಗ್ ಉತ್ತರ ನೀಡಿರಲಿಲ್ಲ. ಈ ಎಲ್ಲಾ ವಿಷಯವನ್ನು ಒಳಗೊಂಡ ದೂರು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಬೇಗ್ ಅವರು ಎಐಸಿಸಿ ಸದಸ್ಯರು ಕೂಡ ಆಗಿರುವುದರಿಂದ ಎಐಸಿಸಿಯೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹೊರತು ಕೆಪಿಸಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇದನ್ನು ಅರಿತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಬ್ಬರು ಸೇರಿ ರೋಷನ್ ಬೇಗ್ ಅವರನ್ನ ಹಣಿಯಲು ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos