ರೌಡಿಗಳ ಪರೇಡ್ ನಡೆಸಿದ ಮಂಗಳೂರು ಪೊಲೀಸರು

ರೌಡಿಗಳ ಪರೇಡ್ ನಡೆಸಿದ ಮಂಗಳೂರು ಪೊಲೀಸರು

ಮಂಗಳೂರು, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುರಿತು ಇಂದು ಮಂಗಳೂರಿನಲ್ಲಿ ಪೊಲೀಸ್ ಇಲಾಖೆ ರೌಡಿಗಳ ಪರೇಡ್ ನಡೆಸಿತು. ಮಂಗಳೂರು ಪೊಲೀಸ್ ಕಮೀಷನೇಟರ್ ವ್ಯಾಪ್ತಿಯ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ.

ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನ ಮುಖಂಡ ಶುಮ್ರಾ ಇರ್ಮಾನ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಲಾಂಗು, ಮಚ್ಚು, ತಲ್ವಾರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸುರತ್ಕಲ್ ನಲ್ಲಿ ಅಪರಾಧಕ್ಕೆ ಬಳಸಿದ ಸ್ಕಾರ್ಪಿಯೋ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಳಿಕ ಪೊಲೀಸ್ ಗ್ರೌಂಡ್ ನಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಯ 200 ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ರೌಡಿಗಳ ಹಳೆ ಫೈಲ್ ಓಪನ್ ಆಗಿದ್ದು, ಚುನಾವಣಾ ಸಂಧರ್ಭದಲ್ಲಿ ದುಷ್ಕೃತ್ಯ ಮೆರೆದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ‌. ರೌಡಿಗಳಿಂದ ಮುಚ್ಚಳಿಕೆ ಬರೆಸಿಕೊಂಡಿದ್ದು, ಚುನಾವಣಾ ಅಂತ್ಯದವರೆಗೆ ಪೊಲೀಸರು ರೌಡಿಗಳ ಮೇಲೆ ಕಣ್ಣಿರಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos