ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ: ಸಿಎಂ

ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ: ಸಿಎಂ

ಬೆಂಗಳೂರು: ಕರಾವಳಿ ಭಾಗದ ಮೀನುಗಾರರು ನಾಪತ್ತೆಯಾಗಿರುವ ಕುಟುಂಬದವರಿಗೆ 1 ಲಕ್ಷ ರೂ. ನೀಡಲಾಗುವುದೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ಘೋಷಿಸಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ನಾಪತ್ತೆಯಾಗಿರುವ ಮೀನುಗಾರರ ಕುಟುಂಬದವರಿಗೆ 1 ಲಕ್ಷ ರೂ. ಚೆಕ್ ವಿತರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಮೀನುಗಾರರ ನಾಪತ್ತೆ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಆ ಮೀನುಗಾರರ ನೋವಿಗೆ ಸರ್ಕಾರ ಸ್ಪಂದಿಸುತ್ತಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಅವರು ಈಗಾಗಲೇ ಉಡುಪಿಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಮೀನುಗಾರಿಕೆ ಸಚಿವರು ಮೀನುಗಾರರ ನೋವಿಗೆ ಸ್ಪಂದಿಸುತ್ತಿಲ್ಲ ಎಂಬ ಭಾವನೆ ಸರಿಯಲ್ಲ ಎಂದರು.

ಮೀನುಗಾರರು ನಾಪತ್ತೆಯಾಗಿರುವ ಮಾಹಿತಿ ದೊರೆತ ತಕ್ಷಣ ತಮ್ಮ ಬಿಡುವಿಲ್ಲದ ಕೆಲಸದ ನಡುವೆಯೂ ಕೇಂದ್ರ ರಕ್ಷಣಾ ಸಚಿವರು, ವಿದೇಶಾಂಗ ಸಚಿವರ ಗಮನಕ್ಕೆ ತರಲಾಗಿದೆ. ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೂ ಈಗಾಗಲೇ ಪತ್ರ ಬರೆಯಲಾಗಿದೆ. ಕರಾವಳಿ ಪಡೆ ಕೂಡ ನಮ್ಮ ಮನವಿಗೆ ಸ್ಪಂದಿಸಿದೆ. ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಕೈಗೊಂಡಿದೆ ಎಂದು ತಿಳಿಸಿದರು.

ನಾಪತ್ತೆಯಾಗಿರುವ ಮೀನುಗಾರರ ಶೋಧ ಕಾರ್ಯ ಮುಂದುವರೆಸಲಾಗುತ್ತಿದೆ. ಈಗಾಗಲೇ ಇರಾನ್‍ನಲ್ಲಿ ಬಂಧನವಾಗಿದ್ದ 15 ಮಂದಿ ಮೀನುಗಾರರು ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಉಗ್ರರು ಎಲ್ಲಿಯಾದರೂ ಅಪಹರಿಸಿದ್ದಾರೆಯೇ ಎಂಬ ಬಗ್ಗೆಯೂ ಗಮನಹರಿಸಿ ಶೋಧ ಕಾರ್ಯ ಮುಂದುವರೆಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos