ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಪೊಲೀಸರ ವಶಕ್ಕೆ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಪೊಲೀಸರ ವಶಕ್ಕೆ

ಬೆಂಗಳೂರು: 2024ರ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಚೆಕ್ ಪೋಸ್ಟ್‌ಗಳಲ್ಲಿ ವಶಕ್ಕೆ ಪಡೆಯಲಾಗುತ್ತಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತಿದ್ದು ಈ ನಡುವೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರು ಮತ್ತು ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ತಿಳಿದು ಬರಬೇಕಿದೆ.  ರಾಜ್ಯದಲ್ಲಿ ಎಲ್ಲಾ ಕಡೆ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos