ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ RSS ಕಟ್ಟಾಳು

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ RSS ಕಟ್ಟಾಳು

ದಾವಣಗೆರೆ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಿಸಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಕಣಕ್ಕಿಳಿಯುತ್ತಿರುತ್ತಾರೆ. ರಾಜ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವುದರಿಂದ ಬಿಜೆಪಿಯಲ್ಲೇ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ ಹಲವಾರು ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.

ಹಾಲಿ ಸಂಸದ ಸಿದ್ಧೇಶ್ವರ್ ಬದಲಿಗೆ ಈ ಬಾರಿ ದಾವಣಗೆರೆ  ಲೋಕಸಭಾ ಟಿಕೆಟ್ ಅವರ ಪತ್ನಿಗೆ ನೀಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಎಂಪಿ ರೇಣುಕಾಚಾರ್ಯ ಕೋಪ ತಣ್ಣಗಾಗುತ್ತಿಲ್ಲ. ಖುದ್ದು ಬಿಎಸ್ ಯಡಿಯೂರಪ್ಪ ಸಂಧಾನ ಮಾಡಿದರೂ ಸಹ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಇದರ ಮಧ್ಯ ಆರ್​​ಎಸ್​ಎಸ್ ಕಟ್ಟಾಳು ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ.ಗುರುಸಿದ್ದ‌ನಗೌಡ ಅವರ ನಿವಾಸಕ್ಕೆ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಭೇಟಿ ನೀಡಿ ಅವರನ್ನು ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಂಡರು. ಇನ್ನು ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಸಿದ್ದ‌ನಗೌಡ ಪುತ್ರ ಡಾ.ರವಿಕುಮಾರ್‌ ಸಹ ಕಾಂಗ್ರೆಸ್ ಸೇರಿದರು.

 

ಫ್ರೆಶ್ ನ್ಯೂಸ್

Latest Posts

Featured Videos