ಹೊಸ ದಾಖಲೆ ಬರೆದ ರುತುರಾಜ್ ಗಾಯಕ್ವಾಡ್

ಹೊಸ ದಾಖಲೆ ಬರೆದ ರುತುರಾಜ್ ಗಾಯಕ್ವಾಡ್

ಬೆಂಗಳೂರು: ನಿನ್ನೆ ನಡೆದ ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ನಿನ್ನೆಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ರುತುರಾಜ್ ಗಾಯಕ್ವಾಡ್  ಐಪಿಎಲ್​ನಲ್ಲಿ 2 ಸಾವಿರ ರನ್ ಪೂರೈಸಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರುತುರಾಜ್, 40 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 69 ರನ್ ಬಾರಿಸಿದ್ದರು.

ಈ 69 ರನ್​ಗಳೊಂದಿಗೆ ರುತುರಾಜ್ ಗಾಯಕ್ವಾಡ್ ಐಪಿಎಲ್​ನಲ್ಲಿ ಅತೀ ವೇಗವಾಗಿ 2000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಬರೆದರು. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು.

ಕೆಎಲ್ ರಾಹುಲ್ 60 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ದಾಖಲೆ ಇರುವುದು ಕ್ರಿಸ್ ಗೇಲ್ ಹೆಸರಿನಲ್ಲಿ. ಗೇಲ್ ಕೇವಲ 48 ಇನಿಂಗ್ಸ್​ಗಳ ಮೂಲಕ 2000 ರನ್ ಕಲೆಹಾಕಿದ್ದರು. ಇದೀಗ 57 ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಪೂರೈಸುವ ಮೂಲಕ ಐಪಿಎಲ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ರುತುರಾಜ್ ಗಾಯಕ್ವಾಡ್ ತಮ್ಮದಾಗಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos