ಎಸ್.ಜಾನಕಿಗೆ ಆಸ್ಪತ್ರೆಗೆ ದಾಖಲು

ಎಸ್.ಜಾನಕಿಗೆ ಆಸ್ಪತ್ರೆಗೆ ದಾಖಲು

ಮೈಸೂರು, ಮೇ. 4, ನ್ಯೂಸ್ ಎಕ್ಸ್ ಪ್ರೆಸ್: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಂದೇ ಹೆಸರಾಗಿರುವ ಎಸ್.ಜಾನಕಿ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸೊಂಟ ಮುರಿದ ಹಿನ್ನೆಲೆ ಕಳೆದ 3 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾನಕಿ ಅವರು ಕೆಲವು ದಿನಗಳ ಹಿಂದೆ ಮೈಸೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಮುರಿದುಕೊಂಡಿದ್ದಾರೆ ಎನ್ನಲಾಗಿದೆ.

ಸೊಂಟದ ಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಜಾನಕಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos