ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್‌ಗೆ ಜನ್ಮದಿನ

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್‌ಗೆ ಜನ್ಮದಿನ

ಬೆಂಗಳೂರು: ಕ್ರಿಕೆಟ್ ಲೋಕದ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡುಲ್ಕರ್ ಅವರು ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಸಚಿನ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಮಹಾರಾಷ್ಟ್ರ ಮೂಲದ ಸಚಿನ್ ತೆಂಡುಲ್ಕರ್ ಏಪ್ರಿಲ್ 24, 1973ರಲ್ಲಿ ಮುಂಬೈನಲ್ಲಿ ಜನಿಸಿದ್ದರು. ಇನ್ನು ತಮ್ಮ 16ನೇ ವಯಸ್ಸಿನಲ್ಲಿ ಅಂದರೆ ನವೆಂಬರ್ 15, 1989ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇನ್ನು ಅದೇ ವರ್ಷ ಡಿಸೆಂಬರ್ 18ರಂದು ಭಾರತ ಏಕದಿನ ಕ್ರಿಕೆಟ್ ತಂಡಕ್ಕೂ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ಸುಮಾರು ಎರಡೂವರೆ ದಶಕಗಳ ಕಾಲ ಮಾಸ್ಟರ್‌ ಬ್ಲಾಸ್ಟರ್ ತೆಂಡುಲ್ಕರ್ ಕ್ರಿಕೆಟ್ ಜಗತ್ತನ್ನು ಆಳಿದರು.

200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡುಲ್ಕರ್ 15, 921 ರನ್ ಬಾರಿಸಿದ್ದಾರೆ. ಇದರಲ್ಲಿ 51 ಶತಕಗಳು ಸೇರಿವೆ. ಇನ್ನು 463 ಏಕದಿನ ಪಂದ್ಯಗಳನ್ನಾಡಿ 19 ಶತಕ ಹಾಗೂ 96 ಅರ್ಧಶತಕ ಸಹಿತ 18,426 ರನ್ ಬಾರಿಸಿದ್ದಾರೆ. ಸಚಿನ್ ತೆಂಡುಲ್ಕರ್ ಭಾರತ ಪರ 6 ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಗಳನ್ನು ಬಾರಿಸಿ ದಾಖಲೆ ಮಾಡಿದ ಕ್ರಿಕೆಟ್‌ ಏಕೈಕ ದಂತಕತೆ ಅಂದರೆ ಅದು ಸಚಿನ್​ ತೆಂಡೂಲ್ಕರ್​. ಅಂತಾರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್​ ಅವರು ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ.

ಅದರಂತೆ 2013ರಲ್ಲಿ ವಿಂಡೀಸ್​ ವಿರುದ್ಧವೇ ಟೆಸ್ಟ್ ಪಂದ್ಯಕ್ಕೆ ಹಾಗೂ 2012ರಲ್ಲಿ ಪಾಕ್ ವಿರುದ್ಧದ ಏಕದಿನ ಪಂದ್ಯಕ್ಕೆ ವಿದಾಯ ಹೇಳುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದರು. ಸಚಿನ್ ಅವರ ಸಾಧನೆಗೆ ಭಾರತರತ್ನ, ಪದ್ಮವಿಭೂಷಣ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ, ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿ 2020 ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.

 

ಫ್ರೆಶ್ ನ್ಯೂಸ್

Latest Posts

Featured Videos