ಸದಾನಂದಗೌಡರಿಂದ ಸಿಹಿ ಸುದ್ದಿ

ಸದಾನಂದಗೌಡರಿಂದ ಸಿಹಿ ಸುದ್ದಿ

ಬೆಂಗಳೂರು, ಜೂ. 24: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರಿಂದ ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಬಾಗಲಗುಂಟೆಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಗಳ ಬಡವರು ಮತ್ತು ಶ್ರೀಸಾಮಾನ್ಯರಿಗೆ ತಲುಪಿಸಲು ಜನೌಔಷಧ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನೌಷಧ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಲಾಗಿದೆ. ಅತಿ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಜನೌಷಧ ಕೇಂದ್ರಗಳನ್ನು ಆರಂಭಿಸಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ.  ಈ ನಿಟ್ಟಿನಲ್ಲಿ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನ ಔಷಧ ಮಳಿಗೆಗಳು ಮತ್ತು ಉಗ್ರಾಣಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos