ಸಾಹಿತಿ ಎಲ್.ಎಸ್. ಶೇಷಗಿರಿರಾವ್ ವಿಧಿವಶ

ಸಾಹಿತಿ ಎಲ್.ಎಸ್. ಶೇಷಗಿರಿರಾವ್ ವಿಧಿವಶ

ಬೆಂಗಳೂರು, ಡಿ. 20 : ಹಿರಿಯ ಸಾಹಿತಿ ಎಲ್.ಎಸ್. ಶೇಷಗಿರಿರಾವ್ ಅವರು ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. 2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕನ್ನಡದ ಖ್ಯಾತ ಸಾಹಿತಿ, ಚಿಂತಕರು, ನಿಘಂಟು ರಚಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಪ್ರೋ ಎಲ್ ಎಸ್ ಶೇಷಗಿರಿ ರಾವ್ (95) ಶುಕ್ರವಾರ ಬೆಳಗ್ಗೆ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಶೇಷಗಿರಿ ರಾವ್ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಪ್ರೊ. ಎಲ್. ಎಸ್. ಶೇಷಗಿರಿರಾವ್ ಅವರು ಫೆಬ್ರವರಿ 16, 1925ರಂದು ಬೆಂಗಳೂರಿನಲ್ಲಿ ಜನಿಸಿದರು. ಅವರು ಮೂಲತಃ ಧಾರವಾಡದ ಹತ್ತಿರದ ಲಕ್ಷ್ಮೇಶ್ವರ ದೇಶಪಾಂಡೆ ಮನೆತನದವರು. ಕನ್ನಡ ಸಾಹಿತ್ಯ ಲೋಕದಲ್ಲಿ ಅವರು ಎಲ್ ಎಸ್ ಎಸ್ ಎಂದೇ ಪ್ರಸಿದ್ಧರು. ಇಂಗ್ಲಿಷ್ ಅಧ್ಯಾಪಕರಾಗಿ ತಮ್ಮ ಪ್ರಿಯ ಶಿಷ್ಯವರ್ಗದವರಿಗೆ ಎಂದೆಂದೂ ಮೇಷ್ಟ್ರು ಎನಿಸಿರುವ ಎಲ್ ಎಸ್ ಎಸ್ ಕನ್ನಡದ ‘ಸಾಕ್ಷೀಪ್ರಜ್ಞೆ’ಯ ಪ್ರತೀಕವೆಂದು ಹೆಸರಾದವರು.
ಪ್ರೊಎಲ್ಎಸ್ ಎಂದೇ ಸಾಹಿತ್ಯ ವಲಯದಲ್ಲಿ ಚಿರಪರಿಚಿತರಾಗಿದ್ದ ಶೇಷಗಿರಿರಾವ್ ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ. ಇಂಗ್ಲಿಷ್ ಸಾಹಿತ್ಯ ಚರಿತ್ರೆ ಕೃತಿಗಾಗಿ ರಾವ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ಸಂದಿತ್ತು. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಂಥ ಪ್ರತಿಷ್ಠಿತ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಪ್ರೊಎಲ್ಎಸ್ಗೆ ಸಂದಿತ್ತು.

ಫ್ರೆಶ್ ನ್ಯೂಸ್

Latest Posts

Featured Videos