ಸಾಲದ ಬಗ್ಗೆ ಸುಳ್ಳಿವು ನೀಡಿದ ಪ್ರಜ್ವಲ್ ರೇವಣ್ಣ

ಸಾಲದ ಬಗ್ಗೆ  ಸುಳ್ಳಿವು ನೀಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು, ಜೂ.28 : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಂದ ಪಡೆದ 26 ಲಕ್ಷ ರೂ. ಸಾಲದ ಬಗ್ಗೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾಹಿತಿ ನೀಡಿಲ್ಲ ವೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಎ.ಮಂಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪದ ಮೇಲೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸದಸ್ಯತ್ವನ್ನು ಅಸಿಂಧುಗೊಳಿಸುವಂತೆ ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ದಾಖಲಿಸಿ, ತುಮಕೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೊಂದಿರುವ ಜಮೀನಿನ ಬಗ್ಗೆ ಮಾಹಿತಿ ನೀಡಿಲ್ಲ. 2012ನೇ ಸಾಲಿನಿಂದ 2017ರವರೆಗೆ ಆದಾಯ ತೆರಿಗೆ ರಿಟರ್ನ್ಸ್ ಘೋಷಣೆ ಮಾಡಿಲ್ಲ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಸುಮಾರು 49 ಲಕ್ಷ ರೂ. ಹಣ ಠೇವಣಿಯಿದ್ದರೂ ಕೇವಲ 5.78 ಲಕ್ಷ ರೂ. ಮೊತ್ತವಿದೆ ಎಂದು ತಿಳಿಸಿದ್ದಾರೆ. ಪ್ರಮಾಣಪತ್ರದಲ್ಲಿ ಇಂತಹ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಅವರು ಮಾರ್ಚ 22ರಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿ, ತಮ್ಮ ಬ್ಯಾಂಕ್ ಬ್ಯಾಲೆನ್ಸ್, ಸ್ಥಿರಾಸ್ತಿ ಹಾಗೂ ಚರಾಸ್ತಿಯ ವಿವರಗಳನ್ನು ಘೋಷಣೆ ಮಾಡಿದ್ದಾರೆ. ಆದರೆ, ಬ್ಯಾಂಕ್ ಬ್ಯಾಲೆನ್ಸ್, ಉದ್ದಿಮೆಗಳಲ್ಲಿ ಪಾಲುದಾರಿಕೆ ಹೊಂದಿರುವ, ಸ್ಥಿರಾಸ್ತಿ ಹಾಗೂ ಚರಾಸ್ತಿಯ ಕುರಿತು ಅನೇಕ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ದೂರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos