ಹೊಸ ಹೊಸ ದಾಖಲೆ ಬರೆದ ‘ಸಲಾರ್’!

ಹೊಸ ಹೊಸ ದಾಖಲೆ ಬರೆದ ‘ಸಲಾರ್’!

ಬೆಂಗಳೂರು: ‘ಸಲಾರ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನು ಸಿನಿಮಾ ನಿಜ ಮಾಡಿದೆ. ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರ ತಂಡಕ್ಕೆ ಸಹಕಾರಿ ಆಗಿದೆ. ತೆಲುಗು ಭಾಷಿಕ ರಾಜ್ಯಗಳಲ್ಲಿ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ.

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಭಾರತ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೂರೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಭರ್ಜರಿ ಹಿಟ್ ಆಗಿದೆ. ಈ ಸಿನಿಮಾದಿಂದ ನಿರ್ದೇಶಕ ಪ್ರಶಾಂತ್ ನೀಲ್ ಅವರ ಬೇಡಿಕೆ ಹೆಚ್ಚಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos