ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕಗೆ ಸರ್ಕಾರದ ನಮನ

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕಗೆ ಸರ್ಕಾರದ ನಮನ

ಬೆಂಗಳೂರು, ಮಾ.18, ನ್ಯೂಸ್ ಎಕ್ಸ್ ಪ್ರೆಸ್: ಸಾಲುಮರದ ತಿಮ್ಮಕ್ಕ ಅವರನ್ನು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಇಂದು ಅಭಿನಂದಿಸಿದರು.

ಮಾ. 16ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿ 46 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಅದಕ್ಕೂ ಮುನ್ನ ಮಾ. 11ರಂದು ಮೊದಲ ಹಂತದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಮಾಗಡಿಯ ಸಣ್ಣ ತಾಲೂಕಿನಿಂದ ಬಂದ ಇವರು ತಮಗೆ ಮಕ್ಕಳಾಗಲಿಲ್ಲ ಎಂಬ ಬೇಸರದಿಂದ ವೃಕ್ಷಗಳನ್ನು ಬೆಳೆಸುವ ಮೂಲಕ ನಿರಾಸೆ ಸರಿದೂಗಿಸುವ ಕೆಲಸ ಮಾಡಿದ್ದಾರೆ.

4 ಕಿ.ಮೀ ಮರಗಳನ್ನು ಬೆಳೆಸುವ ಮೂಲಕ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಪರಿಸರ ನಾಶವಾಗುತ್ತಿರುವ ಈ ಸಂದರ್ಭದಲ್ಲಿ ಇವರ ಕೆಲಸ ನಮ್ಮೆಲ್ಲರಿಗೂ ಮಾದರಿ, ಇದನ್ನು ಗುರುತಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos