“ಸಮಾಧಿಯ ಮೇಲೆ ತಮ್ಮ ಮಗನ ರಾಜಕೀಯ ಬುನಾದಿ…” ಸುಮಲತಾ

“ಸಮಾಧಿಯ ಮೇಲೆ ತಮ್ಮ ಮಗನ ರಾಜಕೀಯ ಬುನಾದಿ…” ಸುಮಲತಾ

ಮಂಡ್ಯ, ಏ. 16, ನ್ಯೂಸ್ ಎಕ್ಸ್ ಪ್ರೆಸ್:  ಬಹಿರಂಗ ಪ್ರಚಾರದ ಅಂತಿಮ ದಿನವಾದ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ನಗರದ ಸಿಲ್ವರ್‌ ಜ್ಯುಬಲಿ ಪಾರ್ಕ್‌ನಲ್ಲಿ ಬಹಿರಂಗ ಪ್ರಚಾರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಹೇಳಿದ್ದಿಷ್ಟು… ಸ್ವಾಭಿಮಾನದ ಸಮ್ಮಿಲನದ ದಿನ ಸ್ವಾಭಿಮಾನದ ಪ್ರತೀಕವಾಗಬೇಕು. ನಾಲ್ಕುವಾರದ ಹಿಂದೆ ಇದೇ ವೇದಿಕೆಯಲ್ಲಿ ನಿಂತು ನಿಮ್ಮನ್ನು ಮಾತನಾಡಿಸಿದ್ದೆ. ಈ ನಾಲ್ಕುವಾರಗಳಲ್ಲಿ ನಾನು ನೋಡಿದ್ದನ್ನು ಇವತ್ತು ನಿಮ್ಮ ಜೊತೆ ಹಂಚಿಕೊಳ್ತೇನೆ. ಈ ಸಮಯದಲ್ಲಿ ನಾನು ಮಂಡ್ಯದ ಜನರಲ್ಲಿ ದೇವರನ್ನು ನೋಡಿದೆ. ನನ್ನ ಅಂಬರೀಷ್‌ ಎಲ್ಲೂ ಹೋಗಿಲ್ಲ ನೀವೆ ಉಳಿಸಿಕೊಂಡಿದ್ದೀರಾ ಎಂದು ಅನ್ನಿಸುತ್ತಿದೆ.ಈ ನಾಲ್ಕು ವಾರಗಳಲ್ಲಿ ರಾಜಕಾರಣಿಗಳಲ್ಲಿ ರಾಕ್ಷಸತ್ವವನ್ನು ನೋಡಿದೆ. ನಿಜವಾಗಲೂ ಬೇಜಾರಾಗುತ್ತೆ. ಒಂದೇ ದಿನದಲ್ಲಿ ತೆಗೆದುಕೊಂಡಿರುವ ತೀರ್ಮಾನ ಇದಲ್ಲ. ಬಹಳಷ್ಟು ಯೋಚನೆ ಮಾಡಿ ಈ ನಿರ್ಧಾರಕ್ಕೆ ಬಂದೆ. ಒಂದಷ್ಟು ಸ್ನೇಹ ಸಂಬಂಧಗಳು ಹಾಳಾಗಬಹುದು ಎಂದು ಗೊತ್ತಿತ್ತು. ನಾನು ಮೊದಲನೇ ಹೆಜ್ಜೆ ಹಾಕಿದಾಗ ಅದು ಒಂಟಿ ಹೋರಾಟ, ಆದರೆ ಇವತ್ತು ನಾನು ಒಂಟಿಯಲ್ಲ. ಇವತ್ತು ನನ್ನ ಜೊತೆ ನಿಂತಿರುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದಿಂದ ಉಚ್ಛಾಟನೆಗೊಂಡರೂ ಸ್ವಾಭಿಮಾನಕ್ಕಾಗಿ ನನ್ನ ಜೊತೆ ಅವರೆಲ್ಲಾ ನಿಂತಿದ್ದಾರೆ. ಅವರ ಜೊತೆ ನಾನು ಯಾವತ್ತೂ ಇರ್ತೇನೆ.ಪ್ರಚಾರ ಸಂದರ್ಭದಲ್ಲಿ ರೈತರ ಸಂಕಷ್ಟವನ್ನು ನೋಡಿದೆ. ಸುಳ್ಳು ಭರವಸೆ ಕೊಟ್ಟು ಓಟು ಪಡೆದುಕೊಂಡು ಹೋದವರು ಜನರ ಕಷ್ಟಗಳಿಗೆ ಸ್ಪಂದಿಸಿಲ್ಲ. ಅಧ್ವಾನಗೊಂಡಿರುವ ರಸ್ತೆಗಳನ್ನು ನೋಡಿದೆ, ಬತ್ತಿ ಹೋಗಿರುವ ಕೆರೆಗಳನ್ನು ನೋಡಿದೆ. ದ್ವೇಷದ ರಾಜಕಾರಣ ಇಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ ಲೀಡ್‌ ಬಂದಿದೆ ಎಂಬ ಕಾರಣಕ್ಕೆ ಆ ಹಳ್ಳಿಗಳಲ್ಲಿ ಸರಕಾರಿ ಕೆಲಸಗಳೇ ನಡೆಯುತ್ತಿಲ್ಲ.ಈ ದೇಶದಲ್ಲಿ ಚುನಾವಣೆಗೆ ಸ್ಪರ್ಧಿಸುವುದೇ ತಪ್ಪಾ? ಕಾನೂನುಬದ್ಧವಾಗಿ ನನಗಿರುವ ಹಕ್ಕು ಇದು ನಾನು ಮಂಡ್ಯದ ಸೊಸೆ, ಹಾಗಾಗಿ ನಾನು ಮಂಡ್ಯದಿಂದಲೇ ಸ್ಪರ್ಧಿಸುತ್ತಿದ್ದೇನೆ. ನಾನು ಈ ಮಣ್ಣಿನ ಸೊಸೆ ಅದಕ್ಕೆ ನಿಮ್ಮ ಪ್ರಮಾಣಪತ್ರ ಅಗತ್ಯವಿಲ್ಲ, ಜನ ನಮ್ಮನ್ನು ಸ್ವೀಕರಿಸಿದ್ದಾರೆ ಅಷ್ಟು ಸಾಕು.

ಫ್ರೆಶ್ ನ್ಯೂಸ್

Latest Posts

Featured Videos