ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡಲು ಕಾಂಗ್ರೆಸಿಗರು ಸಂಕಲ್ಪ ಮಾಡಬೇಕು: ಸಿದ್ದರಾಮಯ್ಯ

ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡಲು ಕಾಂಗ್ರೆಸಿಗರು ಸಂಕಲ್ಪ ಮಾಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ಆಶಯಗಳಿಗೆ ಧಕ್ಕೆ ತರುವ ಬಿಜೆಪಿ, ಆರ್‍ಎಸ್‍ಎಸ್, ಭಜರಂಗದಳಗಳ ಪ್ರಯತ್ನಗಳ ವಿರುದ್ಧ ಹೋರಾಟ ಮಾಡುವ ಸಂಕಲ್ಪವನ್ನು ಕಾಂಗ್ರೆಸಿಗರು ತೊಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ 70ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ತಿರುಚುವ ಮತ್ತು ಸುಡುವ ಪ್ರಯತ್ನಗಳು ನಡೆಯುತ್ತಿವೆ.

ದೇಶದ ಅಭಿವೃದ್ಧಿಯಾಗಬೇಕಾದರೆ ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿದಾಗ ಮಾತ್ರ ಸಾಧ್ಯ. ಹೀಗಾಗಿ ನಾವು ಸಂವಿಧಾನದ ಆಶಯಗಳನ್ನು ಜಾರಿಗೊಳಿಸಲು ನಿರಂತರ ಪ್ರಯತ್ನ ಮುಂದುವರೆಸಬೇಕು ಎಂದರು.

ಸಂವಿಧಾನ ಜಾರಿಯಾಗಿ 69 ವರ್ಷಗಳಾಗಿವೆ. ಭಾರತ ಸ್ವತಂತ್ರ ಸಾರ್ವಭೌಮ ರಾಷ್ಟ್ರವಾಗಿ ಘೋಷಣೆಯಾದಾಗ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಅಂದಿನ ಜವಾಹರಲಾಲ್ ನೆಹರು ಕಾಲದಿಂದ ಇಂದಿರಾಗಾಂಧಿ, ರಾಜೀವ್‍ಗಾಂಧಿ, ಸೋನಿಯಾಗಾಂಧಿ, ಈವರೆಗಿನ ರಾಹುಲ್‍ಗಾಂಧಿಯವರೆಗೂ ಎಲ್ಲರೂ ಸಂವಿಧಾನದ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos