ಸನಾತನ ಧರ್ಮ ವಿವಾದ: ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ

ಸನಾತನ ಧರ್ಮ ವಿವಾದ: ಮೋದಿ ಹೇಳಿಕೆಗೆ  ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಇತ್ತೀಚಿಗೆ ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಧರ್ಮದ ಬಗೆಗಿನ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’ಎನ್ನುವ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಅದು ಎಲ್ಲಾ ವರ್ಗದವರಿಗೂ ಸಂಭಂಧಿಸಿದ್ದು ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.
ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆಂದು ಎಂದು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.
ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ಅವರು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಮಾಜದಲ್ಲಿ ಸ್ವಾಸ್ತ್ಯ ಕಾಪಾಡಬೇಕಾದವರು ಧರ್ಮದ ಹೆಸರಿನಲ್ಲಿ ಅಶಾಂತಿಯನ್ನು ಉಂಟುಮಾಡಲು ಪ್ರೇರೇಪಿಸುತತ್ತಿದ್ದಾರೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos