ನಟಿ ಮೇಲೆ ಅತ್ಯಾಚಾರ

ನಟಿ ಮೇಲೆ ಅತ್ಯಾಚಾರ

ದೊಡ್ಡ ಕಂಪೆನಿಯ ಸಿಇಓ ಎಂದು ಪರಿಚಯಿಸಿಕೊಂಡಿದ್ದ ವ್ಯಕ್ತಿಯೊಬ್ಬ ಕನ್ನಡದ ಸಿನಿಮಾ ನಟಿ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ಮುಂದುವರೆದಿದೆ.

ಮೋಹಿತ್ ಎಂಬಾತ ನಟಿಯನ್ನು ತಮ್ಮ ಕಂಪೆನಿಗೆ ರಾಯಭಾರಿಯನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಸುಳ್ಳು ಹೇಳಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದನು. ಬಳಿಕ ಹುಟ್ಟುಹಬ್ಬವನ್ನು ಮನೆಯಲ್ಲಿ ಆಚರಿಸುವ ನೆಪ ಮಾಡಿಕೊಂಡು ಜ್ಯೂಸ್‌ನಲ್ಲಿ ಅಮಲಿನ ಮಾತ್ರೆಗಳನ್ನು ಬೆರೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಘಟನೆಯನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಮಾಡಿದ್ದಲ್ಲದೇ, ೨೦ ಲಕ್ಷ ಹಣ ಕಿತ್ತುಕೊಂಡಿದ್ದಾನೆ ಎಂದು ನಟಿ ದೂರು ನೀಡಿದ್ದಾಳೆ.

ಜಗಜೀವನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೋಹಿತ್‌ಗಾಗಿ ಹುಡುಕಾಟ ಮುಂದುವರೆದಿದೆ

ಫ್ರೆಶ್ ನ್ಯೂಸ್

Latest Posts

Featured Videos