ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

ಹಿರಿಯ ನಟಿ ಜಯಂತಿ ಹಾಗೂ ನಿರ್ಮಾಪಕ, ನಟ ರಾಕ್‍ಲೈನ್ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ಜಯಂತಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಗ ವಿಜಯ ಕೃಷ್ಣ ತಿಳಿಸಿದ್ದಾರೆ. ಜಯಂತಿ ಅವರಿಗೆ ವೈದ್ಯ ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಕೊರೋನಾ ಪರೀಕ್ಷೆಯನ್ನೂ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ.

ರಾಕ್‍ಲೈನ್ ವೆಂಕಟೇಶ್ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ. ಆದರೆ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಕು ಕಂಡು ಬಂದಿದೆ. ಇವರ ಜೊತೆಯಲ್ಲಿ ಸದಾ ಇರುತ್ತಿದ್ದ ರಾಕ್‍ಲೈನ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮಗ ವೈದ್ಯರಾಗಿದ್ದು, ಅಪ್ಪನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos