ಸರಣಿ ಅಪಘಾತ: ಇಬ್ಬರ ಸಾವು

ಸರಣಿ ಅಪಘಾತ: ಇಬ್ಬರ ಸಾವು

ವಿಜಯಪುರ, ಅ.17 : ಲಾರಿಗೆ ಹಿಂಬದಿಯಿಂದ ಟಿಪ್ಪರ್, ಟಿಪ್ಪರ್ ಗೆ ಕಾರು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತ ಸಂಭವಿಸಿದ ಹಿನ್ನಲೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ.
ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos