ಫೆ 29 ರಂದು ಬೃಹತ್‌ ಸರಸ್ ಮೇಳ

ಫೆ 29 ರಂದು ಬೃಹತ್‌ ಸರಸ್ ಮೇಳ

ಬೆಂಗಳೂರು: ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣ ಕಾರ್ಯಕ್ರಮವನ್ನು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿಕಾಸಸೌಧದಲ್ಲಿಂದು ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣ ಮತ್ತು ಬೃಹತ್ ರಾಷ್ಟ್ರೀಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಲಾಂಛನವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಾ. ಶರಣ ಪ್ರಕಾಶ್ ಪಾಟೀಲ್, ಶಾಸಕರಾದ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಬಿಡುಗಡೆ ಮಾಡಿದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾ‌ರ್ ಮಾತನಾಡಿ, ಈ ರೀತಿಯ ಕರಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಸರಸ್ ಮೇಳವು ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆಬ್ರವರಿ 29ರಿಂದ ಒಂದು ತಿಂಗಳ ಕಾಲ ನಡೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಮತ್ತು ಇಲಾಖೆ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ರಾಷ್ಟ್ರೀಯ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು ಭಾಗವಹಿಸಲಿವೆ. ಈ ಗುಂಪುಗಳು ಉತ್ಪಾದಿಸಿದ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತವೆ ಎಂದರು. ಬಳಿಕ ಮಾತನಾಡಿದ ಡಾ. ಶರಣ ಪ್ರಕಾಶ್ ಪಾಟೀಲ್, ಈ ಕಾರ್ಯಕ್ರಮವು ಕರ್ನಾಟಕದಾದ್ಯಂತ ವಿವಿಧ ರೀತಿಯ ಕರಕುಶಲ ವಸ್ತುಗಳನ್ನು ಮತ್ತು ವಿವಿಧ ರೀತಿಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ. ಕಾರ್ಯಕ್ರಮವು ವಿವಿಧ ಗಣ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಒಳಗೊಂಡಿರುತ್ತದೆ ಎಂದರು.

ಇದೇ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಅಪರ ಮುಖ್ಯಕಾರ್ಯದರ್ಶಿ ಉಮಾ ಮಹಾದೇವನ್ ಅವರು 44 ಲಕ್ಷ ಮಹಿಳೆಯರು ನಮ್ಮ ಸ್ವ ಸಹಾಯ ಸಂಘಗಳಲ್ಲಿ ನೋಂದಾಯಿಸಿದ್ದಾರೆ ಎಂದು ಹೇಳಿದರು.

ಒಂದು ಲಕ್ಷ ಕಾಫಿ ದರ್ಶಿನಿಗೆ ಉತ್ತೇಜನ ನೀಡುವ ಮೂಲಕ ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವ ಪ್ರಯತ್ನ ನಡೆದಿದೆ ಎಂದರು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಹಿಳೆಯರಿಗೆ ತರಬೇತಿ ನೀಡಲಾಗಿದೆ. ಸುಮಾರು 1500 ಮಹಿಳೆಯರು ವಾಹನ ಚಲಾಯಿಸುತ್ತಿದ್ದಾರೆ ಬೇರೆ ರಾಜ್ಯಗಳಿಂದ 100 ಮಹಿಳೆಯರು ಮಳಿಗೆಗಳನ್ನು ಹಾಕುತ್ತಿದ್ದಾರೆ. ನಮ್ಮ ರಾಜ್ಯದ ಮಹಿಳೆಯರು ಸಹ 150 ಮಳಿಗೆಯನ್ನು ಹಾಕುತ್ತಿದ್ದಾರೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರದ ಎಸ್. ಟಿ.  ಸೋಮಶೇಖರ್,ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಆಡಳಿತ ಆಧಿಕಾರಿಯಾದ ಶ್ರೀ ವೀದ್ಯಾ ಪಿ. ಐ,  ಸರ್ಕಾರದ ಅಪರ ಕಾರ್ಯದರ್ಶಿ, ಗ್ರಾ. ಅ. ಮತ್ತು ಪಂ. ರಾಜ್ ಹಾಗೂ ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಮತ್ತು ಜೀವನೋಪಾಯ ಆಧಿಕಾರಿಯಾದ ಉಮಾ ಮಹಾದೇವನ್ ಪುಲಿಕೇಶಿ ನಗರದ ಶಾಸಕರಾದ ಎ.ಸಿ. ಶ್ರೀನಿವಾಸ್, ನೆಲಮಂಗಲ ಶಾಸಕರಾದ  ಶ್ರಿನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos