ಅಥಣಿ, ನ. 24 : ಅಥಣಿಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಲಕ್ಷ್ಮಣ ಸವದಿ ಅವರ ಉಪಮುಖ್ಯಮಂತ್ರಿ ಸ್ಥಾನ ಕಾಯಂ ಮುಂದುವರಿಸುವ ಜೊತೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನೂ ನೀಡಲಾಗುವುದು. ಉಪ ಚುನಾವಣೆಯಲ್ಲಿ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆದ್ದು ಟೀಕಾಕಾರರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸ್ಥಳೀಯ ಜೆ.ಎ. ಪದವಿ ಪೂರ್ವ ಮಹಾವಿದ್ಯಾಲಯ ದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಹೇಶ ಕುಮಟಳ್ಳಿ ಸೇರಿ 17 ಜನ ಶಾಸಕರ ತ್ಯಾಗದಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿ ತತ್ವ ಹಾಗೂ ಸಿದ್ಧಾಂತ ನಂಬಿ ಪಕ್ಷಕ್ಕೆ ಬಂದಿದ್ದರಿಂದ ಅವರಿಗೆ ಯಾವುದೇ ಮೋಸವಾಗದಂತೆ ಎಲ್ಲರಿಗೂ ನ್ಯಾಯ ದೊರಕಿಸುವುದು ನಮ್ಮ ಕರ್ತವ್ಯ. ಮುಂದೆ ಅಥಣಿ ಯಿಂದ ಇಬ್ಬರು ಮಂತ್ರಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.