579 ಹುದ್ದೆಗಳಿಗೆ ಎಸ್.ಬಿ.ಐ.ನಲ್ಲಿ ನೇಮಕಾತಿ

579 ಹುದ್ದೆಗಳಿಗೆ ಎಸ್.ಬಿ.ಐ.ನಲ್ಲಿ ನೇಮಕಾತಿ

ಬೆಂಗಳೂರು, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್:  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅನೇಕ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಎಸ್.ಬಿ.ಐ. ರಿಲೇಶನ್ಶಿಪ್ ಮ್ಯಾನೇಜರ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಎಸ್.ಬಿ.ಐ.ನಲ್ಲಿ ರಿಲೇಶನ್ಶಿಪ್ ಮ್ಯಾನೇಜರ್ ಸೇರಿದಂತೆ 579 ಹುದ್ದೆಗಳ ನೇಮಕಕ್ಕೆ ಮುಂದಾಗಿದೆ. ಯಾವ ಯಾವ ಹುದ್ದೆ ಎಂಬ ವಿವರ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂಬಿಎ/ಪಿಜಿಡಿಎಂ, ಪದವಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳು 750 ರೂಪಾಯಿ ಹಾಗೂ ಎಸ್ಸಿ/ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು 125 ರೂಪಾಯಿ ಪಾವತಿಸಿ ಅರ್ಜಿ ಭರ್ತಿ ಮಾಡಬೇಕು. ಮೇ 23ರಿಂದಲೇ ಅರ್ಜಿ ಸಲ್ಲಿಕೆ ಶುರುವಾಗಿದೆ. ಜುಲೈ 12ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು sbi.co.in ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಫ್ರೆಶ್ ನ್ಯೂಸ್

Latest Posts

Featured Videos