ಎಸ್ ಬಿಐ ನೇಮಕಾತಿ

ಎಸ್ ಬಿಐ ನೇಮಕಾತಿ

ಬೆಂಗಳೂರು, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 8,904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಜಿಯನ್ನು ಮೇ 3,2019 ರೊಳಗೆ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಏಪ್ರಿಲ್ 1,2019 ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13,075/-ರಿಂದ 31,450/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಎಸ್ಬಿಐನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos