ಎಸ್‌ಬಿಐ ನೇಮಕಾತಿ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಬಿಐ ನೇಮಕಾತಿ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

. 2, ನ್ಯೂಸ್ ಎಕ್ಸ್ ಪ್ರೆಸ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿಯನ್ನು ಏ. ಲ್ 22,2019 ರೊಳಗೆ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ : ಹುದ್ದೆಗಳಿಗೆ ಯಾವುದೇ ಪದವಿ ಮತ್ತು ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಏ.1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷ),(ಓಬಿಸಿ ಅಭ್ಯರ್ಥಿಗಳಿಗೆ 13 ವರ್ಷ) ಮತ್ತು( ಸಾಮಾನ್ಯ /ಆರ್ಥಿಕವಾಗಿ ಹಿಂದುಳಿಗೆ ಅಭ್ಯರ್ಥಿಗಳಿಗೆ 10 ವರ್ಷ), ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ 23,700/- ರಿಂದ 42,020/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ ವರ್ಗ/ ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 22,2019 ರೊಳಗೆ ಪಾವತಿಸಬೇಕಿರುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos