ಕೋಲ್ಕತಾ ಸಿಬಿಐ ಅಧಿಕಾರಿಗಳ ತನಿಖೆಗೆ ಅಸಹಕಾರ: ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ

ಕೋಲ್ಕತಾ ಸಿಬಿಐ ಅಧಿಕಾರಿಗಳ ತನಿಖೆಗೆ ಅಸಹಕಾರ: ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ

ನವದೆಹಲಿ: 2 ಹಗರಣಗಳ ತನಿಖೆಗೆ ನಮಗೆ ಪಶ್ಚಿಮಬಂಗಾಳ ಸರಕಾರ ಹಾಗೂ ಅಲ್ಲಿನ ಪೊಲೀಸರು ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

ಶಾರದಾ ಚಿಟ್ ಫಂಡ್ ಹಗರಣದ ವಿಚಾರಣೆಗೆ ಸಿಬಿಐ ಅಧಿಕಾರಿಗಳು ರವಿವಾರ ರಾತ್ರಿ ಕೋಲ್ಕತಾಕ್ಕೆ ಅನಿರೀಕ್ಷಿತ ಭೇಟಿ ನೀಡಿದ ವೇಳೆ ನಡೆದ ಹೈಡ್ರಾಮಾದಲ್ಲಿ ಕೋಲ್ಕತಾ ಪೊಲೀಸರು ಸಿಬಿಐ ಅಧಿಕಾರಿಗಳನ್ನೇ ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದ ಘಟನೆ ನಡೆದಿತ್ತು.

ಕೋಲ್ಕತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಚಿಟ್ ಫಂಡ್ ಹಗರಣದಲ್ಲಿ ಪ್ರಧಾನ ಆರೋಪಿಯಾಗಿದ್ದು, ಅವರು ತಮ್ಮ ತನಿಖೆಗೆ ಸಹಕಾರ ನೀಡುವಂತೆ ಆದೇಶಿಸಬೇಕೆಂದು ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಮನವಿ ಮಾಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos