ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ!

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಅತ್ಯಂತ ಯಶಸ್ವಿಯಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಒಂದು ಯೋಜನೆಯಾದ ಯುವನಿಧಿ ಯೋಜನೆಯನ್ನು ನಿರುದ್ಯೋಗ ಯುವಕ ಯುವತಿಯರಿಗೆ ಪ್ರೋತ್ಸಾಹ ಧನವನ್ನಾಗಿ ಸರ್ಕಾರ ನೀಡುತ್ತಿರುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ವದ ಕಾತರಿ ಯೋಜನೆಯಾದ ಯುವನಿಧಿ ಯೋಜನೆಯನ್ನು 2023ರ ಡಿಸೆಂಬರ್ 26ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಯಿತು.

2023 ರಲ್ಲಿ ಪದವಿ, ಡಿಪ್ಲೋಮೋ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಉತ್ತೀರ್ಣರಾಗಿ ಆರು ತಿಂಗಳಾದರೂ ಸರ್ಕಾರಿ ಖಾಸಗಿ ಸ್ವಯಂ ಉದ್ಯೋಗ ಹೊಂದಿಲ್ಲದವರು ಹಾಗೂ ಉತ್ಪನ್ನಭ್ಯ ವಿದ್ಯಾಭ್ಯಾಸ ಮುಂದುವರಿಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಭೇಟಿ ನೀಡಿ http:/sevasindhugs.karnataka.gov.in ಪೋಟೆಲ್ ಮೂಲಕ ಉಚಿತವಾಗಿ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವಿ ಧರರಿಗೆ, ಸ್ನಾತಕೋತ್ತರ, ಪದವಿ, ಇಂಜಿನಿಯರ್, ಪದವೀಧರರಿಗೆ ಪ್ರತಿ ತಿಂಗಳು 3000 ರೂಗಳು ಹಾಗೂ ಡಿಪ್ಲೋಮ ವಿದ್ಯಾರ್ಥಿಗಳಿಗೆ ಒಂದೂವರೆ ಸಾವಿರ ರೂಗಳನ್ನು ನಿರುದ್ಯೋಗ ಬತ್ತಿಯನ್ನಾಗಿ ಉದ್ಯೋಗ ಸಿಗುವವರೆಗೂ ಅಥವಾ ಗರಿಷ್ಠ ಎರಡು ವರ್ಷದವರೆಗೂ ನೀಡಲಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos