ವಿಜಯನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ನಗರದ ತಾಲೂಕ ಕಚೇರಿಯ ಮುಂದೆ ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟುಡೆಂಟ್ಸ್ ಆರ್ಗನೈಸೇಷನ್ (AIDSO) ನಿಂದ ಪ್ರತಿಭಟನೆ ನಡೆಯಿತು.
ಈ ಹಿಂದೆ ಸರ್ಕಾರ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 5,000 ದಿಂದ 60,000ಸಾವಿರರಿಂದ ಅರವತ್ತು ಸಾವಿರದವರೆಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ದಿಡೀರನೆ 1100 ರಿಂದ 11000ಕ್ಕೆ ತಿಳಿಸಲಾಗಿದ್ದು, ಸರ್ಕಾರ ಈ ವಿಷಯದಲ್ಲಿ ತೆಗೆದುಕೊಂಡ ನಿರ್ಣಯ ಬಡ ಮಕ್ಕಳಿಗೆ ನೋವಿನ ಮೇಲೆ ಬರೆ ಎಳೆದಂತಾಗಿದೆ.
ಇನ್ನು ದೇಶದಲ್ಲಿ ಎಲ್ಲಾ ಹಂತದ ಶಿಕ್ಷಣವು ವ್ಯಾಪಾರಿಕರಣಗೊಂಡು ಶಿಕ್ಷಣದ ಶುಲ್ಕಗಳು ಆಕಾಶಕ್ಕೇರಿವೆ,ಇತ್ತೀಚಿನ ದಿನಗಳಲ್ಲಿ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವುದು ಅತ್ಯಂತ ಕಷ್ಟಕರವಾಗಿದೆ. ಇಂದಿನ ಈ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ವಿದ್ಯಾರ್ಥಿ ವೇತನ ನೂತನ ಸರ್ಕಾರ ಕಡಿತಗೊಳಿಸಿರುವುದು ಕಾರ್ಮಿಕರ ಹಾಗೂ ಬಡ ಮಕ್ಕಳ ಶಿಕ್ಷಣದ ಚಿಗುರುತನವನ್ನು ಚಿವುಟಿ ಹಾಕಿದಂತಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ವಿಜಯನಗರ ಜಿಲ್ಲಾ ಘಟಕ ಘೋಷಣೆಗಳ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ನೀಡಿದರು.
ವರದಿಗಾರ, ಎ ಚಿದಾನಂದ,ವಿಜಯನಗರ.