ಶಾಲಾ ಬಸ್​ ಪಲ್ಟಿ, ಐವರು ಮಕ್ಕಳು ಸಾವು

ಶಾಲಾ ಬಸ್​ ಪಲ್ಟಿ, ಐವರು ಮಕ್ಕಳು ಸಾವು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ತಾನೇ ಇದೆ. ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ಕನಿನಾ ಉಪವಿಭಾಗದ ಉನ್ಹಾನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಚ್ಚರಿಯ ಸಂಗತಿ ಎಂದರೆ ಸರ್ಕಾರಿ ರಜೆ ಇದ್ದರೂ ಶಾಲೆ ತೆರೆದಿತ್ತು. ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos