ಪಿಂಚಣಿಗೆ ಶಾಲಾ ನೌಕರರ ಒತ್ತಾಯ

ಪಿಂಚಣಿಗೆ ಶಾಲಾ ನೌಕರರ ಒತ್ತಾಯ

ತುಮಕೂರು: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ನಿಶ್ಚಿತ ಪಿಂಚಣಿ ವ್ಯವಸ್ಥೆಗೆ ಒತ್ತಾಯಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರಾಜ್ಯ ಸಂಘದ ಪದಾಧಿಕಾರಿ ವೆಂಕಟಾಚಲಯ್ಯ, ‘ರಾಜ್ಯ ಸರ್ಕಾರ 2006 ರಿಂದ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ, ವಂತಿಗೆ ಆಧಾರಿತ ನೂತನ ಪಿಂಚಣಿ ಯೋಜನೆ ಸೌಲಭ್ಯ ನೀಡಿಲ್ಲ. ಇದರಿಂದ ಸಾವಿರಾರು ನೌಕರರು ಸಂಬಳ ಪಡೆದು ಬರಿಗೈಯಲ್ಲಿ ನಿವೃತ್ತರಾಗಿದ್ದು, ನಿವೃತ್ತಿ ನಂತರ ಸಂಕಷ್ಟದಲ್ಲಿ ಬದುಕು ನಡೆಸುವಂತಾಗಿದೆ’ ಎಂದು ಹೇಳಿದರು.
ಕಳೆದ 10 ವರ್ಷಗಳಿಂದ ಸಂಘಟನೆ ಈ ಬಗ್ಗೆ ಒತ್ತಾಯಿಸುತ್ತಿದ್ದರೂ ಅನುದಾನಿತ ನೌಕರರ ಹಿತ ಕಾಯುವ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯೋನ್ಮುಖವಾಗಿಲ್ಲ. ಬೇಡಿಕೆ ಈಡೇರಿಸದಿದ್ದರೆ ಜ. ೪ರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಂಘದ ತುಮಕೂರು ಘಟಕದ ಅಧ್ಯಕ್ಷ ಹನುಮೇಶ್, ‘ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಕೋವಿಡ್ ಆರಂಭದಿಂದ ಸಂಕಷ್ಟದಲ್ಲಿ ಇದ್ದಾರೆ. ಶಾಲೆಗಳು ನಡೆಯದ ಕಾರಣ ವೇತನಗಳು ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ ಎನ್ನುವುದು ಒಂದೆಡೆಯಾದರೆ, ನಿವೃತ್ತಿ ನಂತರದ ಬದುಕು ದುಸ್ತರವಾಗಿದೆ’ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos