ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮ

ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮ

ಕೆ.ಆರ್.ಪುರ, ಡಿ. 12: ಮಕ್ಕಳಲ್ಲಿ ಭಾದಿಸುವ ಭಯಾನಕ ಕಾಯಿಲೆಗಳನ್ನು ತಡೆಗಟ್ಟಲು ಸಮಯಕ್ಕೆ ಸರಿಯಾಗಿ ನಿಯಮಾನುಸಾರ ಲಸಿಕೆ ಕೊಡಿಸುವುದು ಪೋಷಕರ ಜವಾಬ್ದಾರಿ ಎಂದು ಬೆಂಗಳೂರು ನಗರ ಜಿಲ್ಲೆ ಆರ್.ಸಿ.ಹೆಚ್ ಅಧಿಕಾರ ಡಾ.ಸಿರಾಜುದ್ದಿನ್ ಮದಿನಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೆ.ಆರ್.ಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿಶೇಷವಾಗಿ ಮಕ್ಕಳಲ್ಲಿ ಉಂಟಾಗುವಂತಹ ಗಂಟಲು ಮಾರಿ, ನಾಯಿ ಕೆಮ್ಮು, ದನುರ್ವವಾಯು ರೋಗಗಳನ್ನು ತಡೆಗಟ್ಟಲು 5 ವರ್ಷಗಳಿಂದ 6 ವರ್ಷಗಳ ವಯಸ್ಸಿನ ಮಕ್ಕಳಿಗೆ ಡಿಪಿಟಿ ರಸೆಯನ್ನು ಮತ್ತು ಹತ್ತರಿಂದ ಹದಿನಾರು ವಯಸ್ಸಿನ ಮಕ್ಕಳಿಗೆ ಟಿಡಿ ಲಸಿಕೆಯನ್ನು ನೀಡಲಾಗುವುದು ಎಂದರು.

ವಿಶೇಷ ಶಾಲಾ ಲಸಿಕಾ ಅಭಿಯಾನವು ರಾಜ್ಯದ ಎಲ್ಲೆಡೆ ಏಕ ಕಾಲದಲ್ಲಿ ಪ್ರಾರಂಭವಾಗಿದ್ದು, ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಮಕ್ಕಳಿಗು ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ನಂತರ ಮಾತನಾಡಿದ ಬೆಂ.ಪೂರ್ವ ತಾಲೂಕು ವೈಧ್ಯಾದಿಕಾರಿ ಡಾ.ಚಂದ್ರಶೇಖರ್, ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಬರುವ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಮ್ಮ ಇಲಾಖಾ ಸಿಬ್ಬಂದಿ ಕುದ್ದು ಭೇಟಿ ನೀಡಿ ರೋಗನಿರೋಧಕ ಲಸಿಕೆ ನೀಡಲಿದ್ದಾರೆ ಎಂದರು.

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಸಮೀಪದ ಪ್ರಾಥಮಿಕ ಆರೋಗ್ಯ ಕೆಂದ್ರ ಹಾಗೂ ಹತ್ತಿರದ ಅಂಗವಾಡಿ ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು, ಪೋಷಕರು ಮಕ್ಕಳಿಗೆ ಲಸಿಕೆ ಕೊಡುಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿ ಹನುಮಂತಪ್ಪ, ವಿಆರ್ಸಿ ತಿಪ್ಪೇಸ್ವಾಮಿ, ಶಾಲಾ ಮುಖ್ಯೋಪಾಧ್ಯಾಯನಿ ಲಕ್ಷ್ಮಿ, ಮೇಲ್ವಿವಿಚಾಕರು ಮಂಜುನಾಥ್ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕರು ಬಾಬು, ರಾಜು, ಆರೋಗ್ಯ ನಿರೀಕ್ಷಕ ಶ್ರೀಶೈಲ, ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos