ಜನವರಿ 1ರಿಂದ ಶಾಲೆಗಳು ಆರಂಭ

  • In State
  • December 28, 2020
  • 214 Views
ಜನವರಿ 1ರಿಂದ ಶಾಲೆಗಳು ಆರಂಭ

ಕಲಬುರ್ಗಿ: ಜನವರಿ 1ರಿಂದ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಳ್ಳಲಿದ್ದು, ಇದಕ್ಕಾಗಿ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಜಾ ಪಿ. ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ತರಗತಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಕುಳಿತುಕೊಳ್ಳಬಹುದು. ಪಾಠ ಹೇಳುವ ಶಿಕ್ಷಕರು ಜನವರಿ 1ಕ್ಕೂ ಮುನ್ನ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಪಡೆದಿರಬೇಕು.
ಅದಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗುತ್ತಿದೆ. ಸುಮಾರು ಎಂಟು ಸಾವಿರ ಶಿಕ್ಷಕರಿದ್ದು, ಅವರು ಕೋವಿಡ್ ತಪಾಸಣೆಗೆ ಒಳಗಾಗಲೇಬೇಕು. ರಾಜ್ಯಮಟ್ಟದ ತಾಂತ್ರಿಕ ಸಮಿತಿ ಈ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರಂತೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾತ್ರ ತರಗತಿಗಳನ್ನು ನಡೆಸಲಾಗುವುದು. ಹೀಗಾಗಿ ಮಧ್ಯಾಹ್ನದ ಬಿಸಿಯೂಟವನ್ನು ಕೊಡುತ್ತಿಲ್ಲ. ಬದಲಾಗಿ ವಿದ್ಯಾರ್ಥಿಗಳಿಗೆ ಪಡಿತರ ವಿತರಿಸಲಾಗುತ್ತಿದೆ.
6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ತರಗತಿಗಳನ್ನು ನಡೆಸಲಾಗುವುದು. ಶಾಲೆಗಳಲ್ಲಿಯೇ ವಿದ್ಯಾಗಮ ನಡೆಸುತ್ತಿದ್ದರೆ, ಆ ಸಮಯಕ್ಕೆ ತೊಂದರೆಯಾಗದಂತೆ ಎಸ್ಸೆಸ್ಸೆಲ್ಸಿ, ಪಿಯು ತರಗತಿಗಳನ್ನು ನಡೆಸಲಾಗುವುದು. ಶಾಲೆಗಳಲ್ಲಿ ಸೋಪು ಮತ್ತು ಸ್ಯಾನಿಟೈಜರ್ ಇಡುವಂತೆ ಸೂಚಿಸಲಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos