ಬಿಸಿಲಿನ ಬೇಗೆಗೆ ಬೆಂಗಳೂರಿನ ಮಂದಿ ಹೈರಾಣು..!

ಬಿಸಿಲಿನ ಬೇಗೆಗೆ ಬೆಂಗಳೂರಿನ ಮಂದಿ ಹೈರಾಣು..!

ಬೆಂಗಳೂರು: ಒಂದೆಡೆ ಈ ಬಾರಿ ಅಂದುಕೊಂಡಂತೆ ಸಕಾಲಕ್ಕೆ ಮಳೆ ಆಗಲಿಲ್ಲ. ಇದರಿಂದ ರೈತರು ಬೆಳೆದ ಬೆಳೆಗೆ ನೀರಿಲ್ಲದೆ ಸಂಕಷ್ಟ ಅನುಭವಿಸಿದ್ದ. ಮತ್ತೊಂದೆಡೆ ಬಿರು ಬೇಸಿಗೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ಬೇಗೆಗೆ ಬೆಂಗಳೂರು ಜನ ಬೇಸತ್ತು ಹೋಗಿದ್ದಾರೆ. ಬೆಂಗಳೂರಿನಲ್ಲಿ ಅತೀ ಫೆಬ್ರವರಿ ತಿಂಗಳಲ್ಲೇ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಬಿಸಿಲಿನ ಶಾಖಕ್ಕೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಶುರುವಾಗ್ತಿದ್ದಂತೆ ನಾನ ರೀತಿಯ ಕಾಯಿಲೆ ವಕ್ಕರಿಸುತ್ತಿದ್ದು, ಅತಿಯಾದ ಉಷ್ಣಾಂಶದಿಂದ ಸಂಭವಿಸುವ ಅನಾರೋಗ್ಯ ಪರಿಸ್ಥಿತಿ ನಿಭಾಯಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.

ರಾಜ್ಯದಲ್ಲಿ ಬಿಸಿಲ ತಾಪ ಮತ್ತು ಬಿಸಿ ಗಾಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಆರೋಗ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಶಿಶುಗಳು ಮತ್ತು ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ಮಾಡುವ ಜನರು, ಮಾನಸಿಕ ಮತ್ತು ದೈಹಿಕ ಕಾಯಿಲೆಗಳು, ವಿಶೇಷವಾಗಿ ಹೃದ್ರೋಗ ಅಥವಾ ಅಧಿಕ ರಕ್ತದೊತ್ತಡ ಹೊಂದಿರುವ ಜನರು ಮತ್ತು ತಂಪಾದ ವಾತಾವರಣದಿಂದ ಬಿಸಿ ವಾತಾವರಣಕ್ಕೆ ಬರುವ ಜನರು ಸೇರಿದಂತೆ ಆರೋಗ್ಯದ ವಿಚಾರದಲ್ಲಿ ದುರ್ಬಲರಾಗಿರುವವರು ಹೆಚ್ಚಿನ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ಮತ್ತೊಂದೆಡೆ, ಬರ ಪರಿಸ್ಥಿತಿಯ ಪರಿಣಾಮ ಬೇಸಗೆ ಆರಂಭದ ವೇಳೆಯೇ ಈ ಬಾರಿ ರಾಜ್ಯದ ಹಲವೆಡೆ ನೀರಿನ ಕೊರತೆ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.

 

 

 

 

ಫ್ರೆಶ್ ನ್ಯೂಸ್

Latest Posts

Featured Videos