ಎಸ್ ಸಿ‌ ಎಸ್ ಪಿ ಮತ್ತು ಟಿ‌ ಎಸ್ ಪಿ ಕಲ್ಯಾಣ ಕಾರ್ಯಕ್ರಮ

ಎಸ್ ಸಿ‌ ಎಸ್ ಪಿ ಮತ್ತು ಟಿ‌ ಎಸ್ ಪಿ ಕಲ್ಯಾಣ ಕಾರ್ಯಕ್ರಮ

ಬೆಂಗಳೂರು: ಬಿಬಿಎಂಪಿ ಆಯವ್ಯಯದಲ್ಲಿ ಎಸ್ ಸಿ‌ ಎಸ್ ಪಿ ಮತ್ತು ಟಿ‌ ಎಸ್ ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಕೂಡಲೆ ರೂಪಿಸಲು ಆಡಳಿತಾಧಿಕಾರಿಯಾದ ಶ್ರೀ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವತಿಯಿಂದ ಎಸ್ ಸಿ‌ ಎಸ್ ಪಿ ಮತ್ತು ಟಿ‌ ಎಸ್ ಪಿ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್ ಸಿ‌ ಎಸ್ ಪಿ ಮತ್ತು ಟಿ‌ ಎಸ್ ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಕೊಳಗೇರಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದರು.
ಪ್ರಮುಖ ನೀರು ನಿಲ್ಲುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ:
ಪಾಲಿಕೆ ಎಲ್ಲಾ ವಲಯದ ಮುಖ್ಯ ಅಭಿಯಂತರರು ತಕ್ಷಣವೇ ಬೃಹತ್ ನೀರುಗಾಲುವೆ ವಿಭಾಗದ ಅಧಿಕಾರಿಗಳ ಜೊತೆ ಸಮನ್ವಯ ನಡೆಸಿ ಪ್ರಮುಖ ನೀರು ನಿಲ್ಲುವ ಸ್ಥಳಗಳನ್ನು ಪರಿಶೀಲಿಸಿ ಸೂಕ್ತ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸೂಚನೆ ನೀಡಿದರು.
ಸಭೆಯಲ್ಲಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ರೆಡ್ಡಿ ಶಂಕರ್ ಬಾಬು, ವಿಶೇಷ ಆಯುಕ್ತರಾದ ಶ್ರೀ ಜಯರಾಮ ರಾಯಪುರ, ಡಾ. ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು, ಅಭಿಯಂತರರು, ಬಿಬಿಎಂಪಿ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos