2ನೇ ಮಗುವಿಗೆ ಜನ್ಮ ನೀಡಿದ ವಿರಾಟ್‌ ದಂಪತಿ

2ನೇ ಮಗುವಿಗೆ ಜನ್ಮ ನೀಡಿದ ವಿರಾಟ್‌ ದಂಪತಿ

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ  ಮತ್ತೊಮ್ಮೆ ಅಪ್ಪನಾಗಿದ್ದಾರೆ. ವಿರುಷ್ಕ ದಂಪತಿಗೆ ಪುತ್ರ ಜನನವಾಗಿದೆ. ಸ್ಟಾರ್ ಜೋಡಿ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಭಾರತದ ಟಾಪ್ ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಗಂಡು ಮಗುವಿನ ಪೋಷಕರಾಗಿದ್ದಾರೆ.

ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಖುಷಿಯ ಸುದ್ದಿಯನ್ನು ಇನ್​ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ. ಇದೀಗ ಗಂಡು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಫೆಬ್ರವರಿ 15ರಂದೇ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಸುದ್ದಿಯನ್ನು ತಡವಾಗಿ ಹಂಚಿಕೊಳ್ಳಲಾಗಿದೆ.

ಗಂಡು ಮಗುವಿಗೆ ‘ಅಕಾಯ್’ಎಂದು ಹೆಸರಿಟ್ಟಿದ್ದಾರೆ ವಿರಾಟ್ ಹಾಗೂ ಅನುಷ್ಕಾ ಶರ್ಮಾ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, ‘ಅತ್ಯಂತ ಸಂತೋಷ ಮತ್ತು ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ. ಫೆಬ್ರವರಿ 15 ರಂದು, ನಾವು ನಮ್ಮ ಗಂಡು ಮಗು ಅಕಾಯ್ ಅನ್ನು ನಮ್ಮ ಜೀವನಕ್ಕೆ ಸ್ವಾಗತಿಸಿದ್ದೇವೆ.

ಅಕಾಯ್, ವಮಿಕಾಳ ಪುಟ್ಟ ಸಹೋದರ. ನಾವು ‘ಅಕಾಯ್’ಅನ್ನು ಸ್ವಾಗತಿಸಿದ ಸುದ್ದಿ ತಿಳಿಸಲು ಬಹಳ ಖುಷಿ ಪಡುತ್ತಿದ್ದೇವೆ. ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಲು ವಿನಂತಿಸುತ್ತೇವೆ ಎಂದು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನವಿ ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos