ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ಸೊಬಗ ನೋಡಿ

ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ಸೊಬಗ ನೋಡಿ

ತುಮಕೂರು, ಡಿ. 18: ಗೊರವನಹಳ್ಳಿ ಇದು ಇದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇರುವ ಒಂದು ಸನ್ನ ಗ್ರಾಮ. ಇಲ್ಲಿ ಇರುವ ಲಕ್ಷ್ಮಿ ದೇವಸ್ಥಾನವು ಧಾರ್ಮಿಕ ಶ್ರದ್ದಾ ಕೇಂದ್ರವಾಗಿದೆ. ಈ ಗ್ರಾಮವು ತನ್ನಲ್ಲಿ ಇರುವ ಲಕ್ಷ್ಮಿ ದೇವಸ್ಥಾನದಿಂದಾಗಿ ಚಿರಪರಿಚಿತವಾಗಿದೆ.

ಗ್ರಾಮದ ಕಮಲಮ್ಮ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದರು ಹಾಗು ಅದರ ಉಸ್ತುವಾರಿ ವಹಿಸಿಕೊಂಡಿದ್ದರು. ಅವರ ಮರಣಾ ನಂತರ ಅವರ ಪುತ್ರರಾದ ಪ್ರಸನ್ನರವರು ಆಡಳಿತ ನೋಡಿಕೊಳ್ಳುತ್ತಿದ್ದಾರೆ. ಈ ದೇವಸ್ಥಾನದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಹಾಗು ಭಾನುವಾರಗಳಂದು ವಿಶೇಷ ಪೂಜೆ ಇರುತ್ತದೆ. ದೇವಾಲಯದ ವತಿಯಿಂದ ಇಲ್ಲಿ ಪ್ರತಿದಿನ ಅಪರಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದವರು ಇಲ್ಲಿ ಒಂದು ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ. ಸಾರ್ವಜನಿಕರು ಅಗತ್ಯ ಹಣವನ್ನು ನೀಡಿ ಇದರ ಉಪಯೋಗ ಪಡೆದುಕೊಳ್ಳಬಹುದು.

ಇಲ್ಲಿ ನೀರಾವರಿ ಮತ್ತು ಮೀನುಗಾರಿಕೆಗೆ ಒಂದು ಸಣ್ಣ ಜಲಾಶಯವನ್ನು ನಿರ್ಮಿಸಲಾಗಿದೆ. ಮಳೆ ಮತ್ತು ಅಕ್ಕಿ ರಾಂಪುರ ಕೆರೆಯ ಹೆಚ್ಚುವರಿ ನೀರು ಗೊರವನಹಳ್ಳಿ ಕೆರೆಗೆ ಆಧಾರ. ಈ ಕೆರೆಯು ನೂರಾರು ಎಕರೆ ಗದ್ದೆ ಹಾಗು ತೋಟಗಳಿಗೆ ನೀರಾವರಿಯ ಅಧಾರವಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos