ಹಿರಿಯ ನಟಿ ಜಯಂತಿಯವರಿಗೆ ದತ್ತಿ ಪ್ರಶಸ್ತಿ

ಹಿರಿಯ ನಟಿ ಜಯಂತಿಯವರಿಗೆ ದತ್ತಿ ಪ್ರಶಸ್ತಿ

ಬೆಂಗಳೂರು, ಮೇ . 15, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದ ಹಿರಿಯ ನಾಯಕಿ ಜಯಂತಿ ಅವರಿಗೆ,  ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2019ರ ಸಾಲಿನ “ಡಾ.ರಾಜ್ಕುಮಾರ್ ಸಂಸ್ಕೃತಿ ದತ್ತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮೇ. 24 ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿನಿಮಾನಟ ಶಿವರಾಜ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos