ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನ

ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ನಿಧನ

ಬೆಂಗಳೂರು, ಮಾ. 13: ತಮ್ಮ ಕೆಲಸದಲ್ಲಿ ಅತಿ ನಿಷ್ಠಾವಂತದಿಂದ ಮೆರೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ಅವರು ಇಂದು ನಿಧನರಾಗಿದ್ದಾರೆ

ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ವಿಧಿವಶರಾಗಿದ್ದಾರೆ. 56 ವರ್ಷ ವಯಸ್ಸಿನ ಚರಣ್ ರೆಡ್ಡಿ, ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕಳೆದ ತಿಂಗಳು ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಸಂಜಯ ನಗರದ ಮನೆಗೆ ಅವರ ಪಾರ್ಥಿವ ಶರೀರ ರವಾನೆಯಾಗಿದ್ದು, ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ.

1993ರ ಬ್ಯಾಚ್ ಅಧಿಕಾರಿಯಾಗಿದ್ದ ಚರಣ್ ರೆಡ್ಡಿ, ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲೋಕಾಯುಕ್ತ SIT ಮಖ್ಯಸ್ಥರಾಗಿದ್ದರು. 5 ವರ್ಷ ಸಿಬಿಐನಲ್ಲೂ ಕೆಲಸ ಮಾಡಿದ್ದರು. ಸದ್ಯ ಸಿಐಡಿ ADGP ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಚರಣ್ ರೆಡ್ಡಿ ನಿಧನದ ಹಿನ್ನೆಲೆ ಇಂದು ವನಿತಾ ಸಹಾಯವಾಣಿ ವತಿಯಿಂದ ನಡೆಯಬೇಕಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos