ಬೆಂಗಳೂರು, ಜ. 6 : ನಗರ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲ್ಸೇತುವೆ ಸಮೀಪ ಇಂದು ಭೀಕರ್ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಕದಕಟ್ಟೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ನ ಬ್ರೇಕ್ ವಿಫಲಗೊಂಡ ಹಿನ್ನೆಲೆಯಲ್ಲಿ ಸರಣಿ ಅಪಘಾತವಾಗಿ ಈ ದುರಂತ ಸಂಭವಿಸಿರುವುದು ತಿಳಿದುಬಂದಿದೆ.
ಕೊಟ್ಟಿಗೆ ಪಾಳ್ಯ ಜಂಕ್ಷನ್ ಬಳಿಯ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿದ್ದ ಬಸ್ಸು ಬ್ರೇಕ್ ವಿಫಲಗೊಂಡಿದ್ದರಿಂದ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ಗಳು, ಆಟೋ ಮೊದಲಾದ ಹಲವು ವಾಹನಗಳಿಗೆ ಗುದ್ದಿದೆ. ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಈ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ಧಾರೆ. ಹತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ.