ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಉಪಸ್ಥಿತಿ

ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಉಪಸ್ಥಿತಿ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಅಭೂತಪೂರ್ವ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos