ಹೊಲಿಗೆ ಮತ್ತು ಬ್ಯೂಟಿಷಿಯನ್ ತರಬೇತಿ

ಹೊಲಿಗೆ ಮತ್ತು ಬ್ಯೂಟಿಷಿಯನ್ ತರಬೇತಿ

ಬೆಂಗಳೂರು, ಮಾ. 13: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಹೊಲಿಗೆ ಮತ್ತು ಬ್ಯೂಟಿಷಿಯನ್ ತರಬೇತಿ ಕೇಂದ್ರಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮರ್ಥನಂ ಸಂಸ್ಥೆಯು ಹಮ್ಮಿಕೊಂಡಿರುವ ಎಲ್ಲ ಕಾರ್ಯಕ್ರಮಗಳನ್ನು ಪ್ರಶಂಸಿಸಿ ಸರ್ಕಾರದ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಮರ್ಥನಂ ಸಂಸ್ಥೆಯನ್ನು ಸರ್ಕಾರದ ಜೊತೆಯಲ್ಲಿ ಕೈಜೋಡಿಸುತ್ತಿದ್ದಾರೆ. ವಿಶೇಷವಾಗಿ ದೃಷ್ಠಿ ವಿಕಲಚೇತನರಿಗೆ ನೀಡುತ್ತಿರುವ ಟಾಕಿಂಗ್ ಲ್ಯಾಪ್ ಟಾಪಗಳನ್ನು ನೀಡುವ ಸಂದರ್ಭದಲ್ಲಿ ಸಮರ್ಥನಂ ಸಂಸ್ಥೆಯ ಫಲಾನುಭವಿಗಳಿಗೆ ವಿಶೇಷವಾಗಿ ಪರಿಗಣಿಸುವುದಾಗಿ ಆಶ್ವಾಸನೆ ನೀಡಿದರು.

12ನೇ ಶತಮಾನದ ವಚನಕಾರ ಶ್ರೀಬಸವಣ್ಣನವರ ವಚನದ ಮೂಲಕ ಶ್ರೀ ಮಹಾಂತೇಶ್ ರವರ ಸಮಾಜ ಸೇವೆಯ ಸಾರ್ಥಕತೆಯನ್ನು ಹಾಡಿ ಹೊಗಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯಗಳನ್ನು ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಥನಂ ಸಂಸ್ಥೆಯ ಸಹಕಾರವನ್ನು ಕೋರಿದರು.

ಮಾನ್ಯ ಮಂತ್ರಿಗಳ ಕೋರಿಕೆಯನ್ನು ಶ್ರೀಯುತ ಮಹಾಂತೇಷ್ ರವರು ಸರ್ಕಾರದೊಂದಿಗೆ ವಿಕಲಚೇತನರ ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮತ್ತು ಸಲಹೆ ಸೂಚನೆಗಳನ್ನು ನೀಡುವ ಭರವಸೆಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಶಿಕಲಾ ಜೊಲ್ಲೆ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶ್ರೀಮತಿ ಲತಾ ನರಸಿಂಹಮೂರ್ತಿ, ನಿರ್ದೆಶಕರು ಭಾರತ ಡೈನಾಮಿಕ್ಸ್ ಲಿಮಿಟೆಡ್(ರಕ್ಷಣಾ ಇಲಾಖೆ) ಮತ್ತು ಶ್ರೀಯುತ ಮಹಾಂತೇಷ್ ಜಿ.ಕೆ. ಸಂಸ್ಥಾಪಕರು ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಶ್ರೀಮತಿ ನಳಿನಾ ಗಿರೀಶ್ ವಿಕಲಚೇತನ ಉದ್ಯಮಿ ಬೆಂಗಳೂರು ಇವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos