ಶಂಕಿತ ಉಗ್ರ ಬಂಧನ

ಶಂಕಿತ ಉಗ್ರ ಬಂಧನ

ಬೆಂಗಳೂರು,ಆ. 29 : ಶಂಕಿತ ಉಗ್ರ ಹಬೀಬುರ್ ರೆಹಮಾನ್ ನೀಡಿದ ಮಾಹಿತಿ ಬೆನ್ನತ್ತಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ತ್ರಿಪುರದ ಅಗರ್ತಲದಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ನಜೀರ್ ಶೇಖ್ ಅಲಿಯಾಸ್ ಪತ್ಲಾ ಅನಾಸ್ ಬಂಧಿತ. 1 ವರ್ಷದ ಹಿಂದೆ ರಾಮನಗರದಲ್ಲಿ ಸೆರೆಸಿಕ್ಕ ಬಿಹಾರದ ಬೋಧಗಯಾ ಮಂದಿರದ ಸ್ಫೋಟದ ‘ಮಾಸ್ಟರ್ಮೈಂಡ್’ ಜೈದುಲ್ ಇಸ್ಲಾಮ್ ಅಲಿಯಾಸ್ ಮುನೀರ್ ಶೇಖ್ ಹಬೀಬುರ್ ರೆಹಮಾನ್ನನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಿಸಿದ್ದ. ಜೈದುಲ್ ಬಂಧನ ಬಳಿಕ ತಲೆಮರೆಸಿಕೊಂಡಿದ್ದ ರೆಹಮಾನ್, ಚಿಕ್ಕಬಾಣಾವರದಲ್ಲಿ ಸಮೀವುಲ್ಲಾ ಎಂಬುವವರ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಈ ಮನೆಯಲ್ಲಿದ್ದ ಐವರು ಸದಸ್ಯರ ಪೈಕಿ ನಜೀರ್ ಶೇಖ್ ಕೂಡ ಒಬ್ಬ ಇದ್ದ. ಹಬೀಬುರ್ ರೆಹಮಾನ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ನಜೀರ್ ಶೇಖ್ ಹಾಗೂ ಶಂಕಿತ ಉಗ್ರರಾದ ಸಜ್ಜದ್ ಅಲಿ, ಖಾದರ್ ಖಾಜಿ, ಅತಾವುರ್ ರೆಹಮಾನ್ ಅಲಿಯಾಸ್ ನಜ್ರುಲ್ ಇಸ್ಲಾಂ ಅಲಿಯಾಸ್ ಮೋಟಾ ಅನಾಸ್, ಆಸೀಫ್ ಇಕ್ಬಾಲ್ ಅಲಿಯಾಸ್ ನದೀಮ್, ಬಾಂಗ್ಲಾದೇಶದ ಅರೀಫ್ ರಾಮನಗರದಲ್ಲಿ ಬಂಧನಕ್ಕೆ ಒಳಗಾದ ಜೈದುಲ್ ಇಸ್ಲಾಂ ಚಿಕ್ಕಬಾಣವಾರದ ಮನೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos